Bidar

ಔರಾದ್-ಬೀದರ್ ಮಧ್ಯೆ ಬಸ್ ಕೊರತೆ!

‘ಬೀದರ್‌ದಿಂದ ಔರಾದ್ ಮಾರ್ಗ ಮಧ್ಯೆ ಸಾರಿಗೆ ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ನಿತ್ಯ ಪರದಾಡುವ ಪರಿಸ್ಥಿತಿ ಎದುರಾಗಿದೆ.

ಸಾಕಷ್ಟು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯ ಜಿಲ್ಲಾ ಕೇಂದ್ರ ಬೀದರ್‌ಗೆ ಬಂದು ಹೋಗುತ್ತಾರೆ. ಆದರೆ, ಸಮರ್ಪಕ ಬಸ್ ಗಳ ಸೌಲಭ್ಯವಿಲ್ಲದೇ ಗಂಟೆಗಟ್ಟಲೇ ಕಾಯುವ ಪರಿಸ್ಥಿತಿ ಬಂದಿದೆ. ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಗೋ ಈಗೋ ಬರುವ ಬಸ್ ಗೆ ನೂಕುನುಗ್ಗಲು ಉಂಟಾಗುತ್ತಿದೆ. ಕೂಡಲೇ ಸಾರಿಗೆ ಇಲಾಖೆ ವ್ಯವಸ್ಥಾಪಕರು ಹೆಚ್ಚಿನ ಬಸ್‌ಗಳ ಸೌಲಭ್ಯ ಒದಗಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮುಖಂಡ ಲಕ್ಷ್ಮಿಕಾಂತ್ ಚಾರೆ ಆಗ್ರಹಿಸಿದ್ದಾರೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button