Featured StoryState News

ವಿವಾದಿತ ಪ್ರದೇಶದಲ್ಲಿ ರಾಮ ಫೋಟೋಗೆ ಪೂಜೆ: ಐವರನ್ನು ವಶಕ್ಕೆ ಪಡೆದ ಪೊಲೀಸರು

ಹಾವೇರಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆದಿದ್ದು ಅದೇ ಸಮಯದಲ್ಲಿ ಹಾವೇರಿಯ ವಿವಾದಿತ ಜಾಗದಲ್ಲಿ ಹಿಂದೂ ಕಾರ್ಯಕರ್ತರು ಶ್ರೀರಾಮನ ಫೋಟೋ ಇಟ್ಟು ಪೂಜೆ ಮಾಡಿದ್ದು ಈ ಸಂಬಂಧ ಐವರನ್ನು ಬಂಧಿಸಲಾಗಿದೆ.

ಹಾವೇರಿಯ ಬಂಕಾಪುರ ಬಸ್ ನಿಲ್ದಾಣದ ಸಮೀಪ ಇರುವ ವಿವಾದಿತ ಜಾಗದಲ್ಲಿ ಶ್ರೀರಾಮನ ಫೋಟೋ ಇಟ್ಟು ಪೂಜೆ ಮಾಡಲಾಗಿದ್ದು ಈ ಸಂಬಂಧ ತಾಲೂಕು ಸಂಚಾಲಕ ಗಂಗಾಧರ್ ಶೆಟ್ಟರ್, ಸೋಮಶೇಖರ್ ಗೌರಿಮಠ, ಈರಣ್ಣ ಬಳೇಗಾರ, ಮೋಹನ್ ಮೀರಜಕರ್​ ಸೇರಿ ಐವರನ್ನು ಬಂಕಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸ್ಥಳಕ್ಕೆ ಹಾವೇರಿ ಎಸ್.ಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಬಳಿಕ ಶ್ರೀರಾಮನ ಭಾವಚಿತ್ರವನ್ನು ತೆಗೆಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಹಾವೇರಿ ಎಸ್​ಪಿ ಹೇಳಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button