Chitradurga

ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ನೇಮಕ

ಚಿತ್ರದುರ್ಗ, ಜನವರಿ, 23: ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ.ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಆದೇಶ ಹೊರಡಿಸಿದ್ದಾರೆ. ಹಾಗೆಯೇ ಅಲ್ಲದೆ ಇವರ ಜಾಗಕ್ಕೆ ಇದೀಗ ನೂತನ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿ ಆದೇಶ ನೀಡಿದ್ದಾರೆ.

ಈ ಕುರಿತಂತೆ ಅಧಿಸೂಚನೆಯನ್ನು ಹೊರಡಿಸಿದ್ದು, 2015ರ ಐಎಎಸ್ ಅಧಿಕಾರಿ ವೆಂಕಟೇಶ್.ಟಿ.ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. 2014 ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ದಿವ್ಯ ಪ್ರಭು ಅವರು ಅಕ್ಟೋಬರ್ 23, 2022ರಂದು ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ‌ ಅಧಿಕಾರ ಸ್ವೀಕರಿಸಿದ್ದರು. ಪ್ರಸ್ತುತ ಇದೀಗ ಇವರನ್ನು ವರ್ಗಾವಣೆ ಮಾಡಿದ್ದು, ಇವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ ಎನ್ನುವ ಮಾಹಿತಿ ತಿಳಿದುಬಂದಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button