Election

ದ.ಕ.: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಸೇರ್ಪಡೆಗೆ ಬೇಕು ಈ ದಾಖಲೆಗಳು

ಮಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ಈ ಕೆಳಗಿನ ದಾಖಲೆಗಳು ಸಲ್ಲಿಸಿ ತಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬಹುದು.

ಅಗತ್ಯವಿರುವ ದಾಖಲೆಗಳು:
ವಯಸ್ಸಿನ ಬಗ್ಗೆ ದಾಖಲೆಗಳು: ಶಾಲಾ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾಸ್‍‌ಪೋರ್ಟ್, ಎಸ್.ಎಸ್.ಎಲ್.ಸಿ /ಪಿಯುಸಿ ಅಂಕಪಟ್ಟಿ, ಪಾನ್‍ಕಾರ್ಡ್ ಹಾಗೂ ವೈದ್ಯಕೀಯ ಪ್ರಮಾಣ ಪತ್ರ.
ವಾಸ ಸ್ಥಳದ ಬಗ್ಗೆ ದಾಖಲೆಗಳು: ಪಡಿತರ ಚೀಟಿ, ಗ್ಯಾಸ್ ಸಿಲಿಂಡರ್ ಸ್ವೀಕೃತಿ ರಶೀದಿ, ವಿದ್ಯುತ್ ಬಿಲ್ ಪಾವತಿ, ಬ್ಯಾಂಕ್ ಪಾಸ್‍ಬುಕ್ ಪ್ರತಿ, ಪಾಸ್‍‌ಪೋರ್ಟ್, ವಾಹನ ಚಾಲನ ಪರವಾನಿಗೆ ಪ್ರತಿ, ಬಾಡಿಗೆ ಕರಾರು ಪತ್ರ ಹಾಗೂ ಇನ್ನಿತರ ದಾಖಲೆಗಳು. ಒಂದು ಪಾಸ್‍ಪಪೋರ್ಟ್ ಅಳತೆಯ ಭಾವಚಿತ್ರ.ಮತದಾರರು ನಮೂನೆ 6 ರಲ್ಲಿ 18 ವರ್ಷ ಪೂರೈಸಿದ ಹೊಸ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಗೆ, ನಮೂನೆ 6ಎ ನಲ್ಲಿ ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆಗೆ, ನಮೂನೆ 7 ರಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು, ನಮೂನೆ 8ರಲ್ಲಿ ಹೆಸರು, ತಂದೆಯ ಹೆಸರು, ಮನೆ ವಿಳಾಸ, ವಯಸ್ಸಿಗೆ ಹಾಗೂ ಭಾವಚಿತ್ರಕ್ಕೆ ಸಂಬಂಧಿಸಿದಂತೆ ದೋಷಗಳನ್ನು ಸರಿಪಡಿಸಬಹುದು. ನಮೂನೆ 6ಬಿ ಯಲ್ಲಿ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಅಥವಾ ನಮೂದಿಸಿರುವ ಇತರ ಯಾವುದಾದರೂ 11 ದಾಖಲೆಗಳನ್ನು ಜೋಡಣೆ ಮಾಡಬಹುದು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ನಾಲ್ಕು ಅರ್ಹತಾ ದಿನಗಳು: ಜನವರಿ 1, ಏಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1, ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ಮತದಾರರ ನೋಂದಾಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಾಣಾಧಿಕಾರಿ ಕಚೇರಿ, ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿ ಅಥವಾ ವೆಬೆಸೈಟ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಬಗ್ಗೆ ಮತ್ತು ತಿದ್ದುಪಡಿ ಬಗ್ಗೆ ಪರಿಶೀಲಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button