Featured StoryUdupi

ಉಡುಪಿ | ನೇಜಾರು ಕೊಲೆ ಪ್ರಕರಣ – ನ್ಯಾಯವಾದಿ ಶಿವಪ್ರಸಾದ್ ಆಳ್ವ ವಿಶೇಷ ಸರಕಾರಿ ಅಭಿಯೋಜಕರಾಗಿ ನೇಮಕ

ಉಡುಪಿ, ಜ.24: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ಸರಕಾರದ ಪರವಾಗಿ ವಾದಿಸಲು ಮಂಗಳೂರಿನ ಹಿರಿಯ ನ್ಯಾಯವಾದಿ ಶಿವಪ್ರಸಾದ್ ಆಳ್ವ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.

ಈ ಪ್ರಕಣದಲ್ಲಿ ಸಂಬಂಧಪಟ್ಟ ವಿಚರಣಾ ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಗಳಲ್ಲಿ ಸರಕಾರದ ಪರವಾಗಿ ಹಾಜರಾಗಲು ಮತ್ತು ಪ್ರಕರಣವನ್ನು ನಡೆಸಲು ಆಳ್ವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ಮುಂದಿನ ಆದೇಶದವರೆಗೆ ನಿಯೋಜಿಸಿದ್ದು, ಈ ಪ್ರಕರಣದ ವಿಚಾರಣೆ ದಿನಾಂಕಗಳಂದು ನ್ಯಾಯಾಲಯಗಳಲ್ಲಿ ಹಾಜರಿದ್ದು, ಪ್ರಕರಣವನ್ನು ನಡೆಸುವಂತೆ ಒಳಾಡಳಿತ ಇಲಾಖೆ(ಪೊಲೀಸ್ ಸೇವೆಗಳು-ಬಿ) ಸರಕಾರದ ಅಧೀನ ಕಾರ್ಯದರ್ಶಿ ಜಿ.ಶ್ಯಾಮ ಹೊಳ್ಳ ಆದೇಶ ನೀಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button