Crime

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ, ನಾಲ್ವರ ಬಂಧನ

ಚಿಕ್ಕಬಳ್ಳಾಪುರ,ಫೆ.24:- ಜಿಲ್ಲೆಯ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಪೆÇಲೀಸರು ಬಂಧಿಸಿದ್ದಾರೆ.
ಸೋಮವಾರ ತಡರಾತ್ರಿ ನಡೆದ ಸ್ಫೋಟ ದುರಂತದಲ್ಲಿ 6 ಮಂದಿ ಕಾರ್ಮಿಕರು ಮೃತಪಟ್ಟಿದ್ದರು.
ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೆÇಲೀಸರು ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಗೋರಂಟ್ಲದಲ್ಲಿ ತಲೆಮೆರೆಸಿಕೊಂಡಿದ್ದ ಪ್ರಕರಣದ ಎರಡನೇ ಆರೋಪಿ, ಗಣಿ ಮಾಲೀಕ ರಾಘವೇಂದ್ರ ರೆಡ್ಡಿ, ಐದನೇ ಆರೋಪಿ ಪ್ರವೀಣ್, ಏಳನೇ ಆರೋಪಿ ಚಾಲಕ ರಿಯಾಜ್ ಮತ್ತು ಹದಿನಾಲ್ಕನೇ ಆರೋಪಿ ಮಧುಸೂದನ್ ರೆಡ್ಡಿ ಅವರನ್ನು ಬಂಧಿಸಿದ್ದಾರೆ.
ಮತ್ತೊಬ್ಬ ಆರೋಪಿ ಬಿಜೆಪಿ ಮುಖಂಡ ಹಾಗೂ ರೈಲ್ವೆ ಸಮಿತಿ ಸದಸ್ಯ ಗುಡಿಬಂಡೆ ನಾಗರಾಜ್‍ಗಾಗಿ ಪೆÇಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button