Crime

ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆ ಇಂದು

ನವದೆಹಲಿ,ಫೆ.26:- ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ.
ಇಂದು ಮಧ್ಯಾಹ್ನ ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ಅವರು ವೇಳಾಪಟ್ಟಿ ಪ್ರಕಟಿಸಲಿದ್ದಾರೆ.
ಕರೊನಾ ಸಂಕಷ್ಟದಲ್ಲಿ ಇದೇ ಮೊದಲ ಬಾರಿಗೆ ದೇಶದಲ್ಲಿ ಇಷ್ಟು ದೊಡ್ಡ ಮಟ್ಟದ ಚುನಾವಣೆ ನಡೆಯುತ್ತಿದೆ. ಬಿಹಾರ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರಿಂದ ಕೇಂದ್ರ ಚುನಾವಣಾ ಆಯೋಗ ಈ ಐದು ವಿಧಾನಸಭೆಗಳ ಚುನಾವಣೆಯನ್ನೂ ಯಶಸ್ವಿಯಾಗಿ ನಡೆಸುವ ಉಮೇದಿನಲ್ಲಿದೆ. ಕರ್ನಾಟಕದ ಮೂರು ವಿಧಾನಸಭೆಗಳ ಉಪಚುನಾವಣೆಯ ಘೋಷಣೆಯೂ ಆಗುವ ಸಾದ್ಯತೆ ಇದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button