ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆ; ವೇಳಾಪಟ್ಟಿ ಇಲ್ಲಿದೆ
ರಾಯಚೂರು,ಅ02:- ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಚುನಾವಣೆ ಘೋಷಿಸಿದ್ದು, ವೇಳಾಪಟ್ಟಿ ಪ್ರಕಟಿಸಿದೆ.
2020ರ ಅಕ್ಟೋಬರ್ 1 ರಂದು ಅಧಿಸೂಚನೆ ಹೊರಡಿಸಲಾಗಿದೆ. ಅ.8ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಅ.9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.12 ನಾಮಪತ್ರಗಳನ್ನು ಹಿಂಪಡೆಯಲು ಕೊನೆಯದಿನ. ಅ.28ರ ಬೆಳಿಗ್ಗೆ 8 ರಿಂದ ಸಂಜೆ 5 ವರೆಗೆ ಚುನಾವಣೆಯ ಮತದಾನ ನಡೆಯಲಿದೆ. ನವೆಂಬರ್ 2ರಂದು ಬೆಳಿಗ್ಗೆ 8 ರಿಂದ ಮತ ಎಣಿಕೆ ನಡೆಯಲಿದೆ.
ರಾಯಚೂರು ಜಿಲ್ಲೆಯ ರಾಯಚೂರು, ಮಾನವಿ, ದೇವದುರ್ಗ, ಸಿರವಾರ, ಲಿಂಗಸೂಗೂರು, ಮಸ್ಕಿ ಹಾಗೂ ಸಿಂಧನೂರು ತಾಲೂಕುಗಳು ಕರ್ನಾಟಕ ಈಶಾನ್ಯ ವಲಯ ಶಿಕ್ಷಕರ ಮತಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ, ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಈಶಾನ್ಯ ಶಿಕ್ಷಕರ ಮತಕ್ಷೇತ್ರಕ್ಕೆ 2020ರ ಸೆ.30 ರಿಂದ ಅನ್ವಯವಾಗುವಂತೆ ನೀತಿ ಸಂಹಿತೆ ಜಾರಿಯಾಗಿರುತ್ತದೆ.
ಈ ಚುನಾವಣೆಗೆ ಕಲಬುರಗಿ ವಿಭಾಗದ ಪ್ರಾದೇಶಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದಾರೆ. ನಾಮಪತ್ರಗಳ ನಮೂನೆಗಳನ್ನು ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಚುನಾವಣಾ ಶಾಖೆಯಿಂದ ಪಡೆಯಬಹುದಾಗಿದೆ. ಭರ್ತಿ ಮಾಡಿದ ನಾಮಪತ್ರಗಳನ್ನು ಚುನಾವಣಾಧಿಕಾರಿಗಳಿಗೆ, ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಕಾನ್ಪರೆನ್ಸ್ ಹಾಲ್ (ಎರಡನೇ ಮಹಡಿ), ಮಿನಿ ವಿಧಾನಸೌಧ, ಕಲಬುರಗಿಯಲ್ಲಿ 2020ರ ಅಕ್ಟೋಬರ್ 1 ರಿಂದ 8 ರವರೆಗೆ ಬೆಳಿಗ್ಗೆ 11 ರಿಂದ ಅಪರಾಹ್ನ 3 ಗಂಟೆಯ ವರೆಗೆ ಸಲ್ಲಿಸಬಹುದಾಗಿದೆ. ಸ್ವೀಕೃತವಾದ ಎಲ್ಲಾ ನಾಮಪತ್ರಗಳನ್ನು 2020ರ ಅಕ್ಟೋಬರ್ 9 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಕಾನ್ಪರೆನ್ಸ್ ಹಾಲ್ನಲ್ಲಿ ಚುನಾವಣಾಧಿಕಾರಿಯಿಂದ ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




