ಎಂಸಿಸಿ ನೋಡಲ್ ಅಧಿಕಾರಿಗಳ ನೇಮಕ
ರಾಯಚೂರು,ಅ02:- ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಈಶಾನ್ಯ ವಲಯ ಶಿಕ್ಷಕರ ಮತಕ್ಷೇತ್ರಕ್ಕೆ ಚುನಾವಣೆಯನ್ನು ಪ್ರಕಟಿಸಿದ್ದು, ಕಲಬುರಗಿಯ ಪ್ರಾದೇಶಿಕ ಆಯುಕ್ತರ ನಿರ್ದೇಶನದಂತೆ ಮಾದರಿ ನೀತಿ ಸಂಹಿತೆ (ಎಂಸಿಸಿ) ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ನಿಯೋಜಿಸಲಾದ ನೋಡಲ್ ಅಧಿಕಾರಿಗಳ ವಿವರ ಇಂತಿದೆ.
ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಜಿಲ್ಲಾ ನೋಡಲ್ ಅಧಿಕಾರಿಗಳು, ರಾಯಚೂರು ತಾಲೂಕು ಪಂಚಾಯತ್ನ ಕಾರ್ಯ ನಿರ್ವಾಹಕ ಅಧಿಕಾರಿ ರಾಯಚೂರು ತಾಲೂಕಿನ ನೋಡಲ್ ಅಧಿಕಾರಿ, ಮಾನವಿ ತಾಲೂಕು ಪಂಚಾಯತ್ನ ಕಾರ್ಯ ನಿರ್ವಾಹಕ ಅಧಿಕಾರಿ ಮಾನವಿ ತಾಲೂಕಿನ ನೋಡಲ್ ಅಧಿಕಾರಿ, ದೇವದುರ್ಗ ತಾಲೂಕು ಪಂಚಾಯತ್ನ ಕಾರ್ಯ ನಿರ್ವಾಹಕ ಅಧಿಕಾರಿ ದೇವದುರ್ಗ ತಾಲೂಕಿನ ನೋಡಲ್ ಅಧಿಕಾರಿ, ಲಿಂಗಸೂಗೂರು ತಾಲೂಕು ಪಂಚಾಯತ್ನ ಕಾರ್ಯ ನಿರ್ವಾಹಕ ಅಧಿಕಾರಿ ಲಿಂಗಸೂಗೂರಿನ ತಾಲೂಕಿನ ನೋಡಲ್ ಅಧಿಕಾರಿ, ಸಿಂಧನೂರು ತಾಲೂಕು ಪಂಚಾಯತ್ನ ಕಾರ್ಯ ನಿರ್ವಾಹಕ ಅಧಿಕಾರಿ ಸಿಂಧನೂರು ತಾಲೂಕಿನ ನೋಡಲ್ ಅಧಿಕಾರಿ, ಸಿರವಾರ ತಾಲೂಕು ಪಂಚಾಯತ್ನ ಕಾರ್ಯ ನಿರ್ವಾಹಕ ಅಧಿಕಾರಿ ಸಿರವಾರ ತಾಲೂಕಿನ ನೋಡಲ್ ಅಧಿಕಾರಿ ಹಾಗೂ ಮಸ್ಕಿ ತಾಲೂಕು ಪಂಚಾಯತ್ನ ಕಾರ್ಯ ನಿರ್ವಾಹಕ ಅಧಿಕಾರಿ ಮಸ್ಕಿ ತಾಲೂಕಿನ ನೋಡಲ್ ಅಧಿಕಾರಿಯಾಗಿ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




