Crime

ಕರ್ನಾಟಕ ಬಜೆಟ್.. ಯಾವ ಯೋಜನೆಗೆ ಎಷ್ಟು ಅನುದಾನ ?, ಇಲ್ಲಿದೆ ಮಾಹಿತಿ

ಬೆಂಗಳೂರು: ಕರೊನಾ ಸಂಕಷ್ಟದ ನಡುವೆಯೂ ಸೋಮವಾರ ಮಂಡನೆಯಾದ ರಾಜ್ಯ ಬಜೆಟ್ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಲವು ಪ್ರಮುಖ ಯೋಜನೆ-ಕಾರ್ಯಕ್ರಮಗಳಿಗೆ ದೊಡ್ಡ ಮೊತ್ತ ಮೀಸಲಿಟ್ಟಿದ್ದಾರೆ. ಅವುಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

  • ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ರೂಪಾಯಿ
  • ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ.
  • ಎಸ್.ಎಲ್.ಭೈರಪ್ಪ ಅವರ ಪರ್ವ ನಾಟಕವನ್ನು ರಾಜ್ಯಾದ್ಯಂತ ರಂಗಾಯಣಗಳ ಮೂಲಕ ನಾಟಕ ಪ್ರದರ್ಶನಕ್ಕೆ 1 ಕೋಟಿ
  • ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.
  • ಕೃಷಿ ಸಂಚಯ ಯೋಜನೆಗೆ 831 ಕೋಟಿ ರೂ. ಮೀಸಲು
  • ಒಕ್ಕಲಿಗರ ನಿಗಮಕ್ಕೆ 500 ಕೋಟಿ ರೂ. ಘೋಷಣೆ
  • ಬಸವಣ್ಣ ಜನ್ಮ ಸ್ಥಳ ಬಸವನಬಾಗೇವಾಡಿಯ ಇಂಗಳೇಶ್ವರ ಗ್ರಾಮ ಅಭಿವೃದ್ಧಿಗೆ 5 ಕೋಟಿ ರೂ.
  • ಕಬಿನಿ ಆಣೆಕಟ್ಟಿನಲ್ಲಿ ಕೆಆರ್‌ಎಸ್ ಮಾದರಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಾಣ
  • ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರಗಳಲ್ಲಿ ಒಟ್ಟು 234 ಕೆರೆ ತುಂಬಿಸುವ ಯೋಜನೆಗೆ 500 ಕೋಟಿ ಅನುದಾನ
  • ಮಹಾದಾಯಿ ಯೋಜನೆಗೆ 1677 ಕೋಟಿ ರೂ. ಅನುದಾನ
  • ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂಪಾಯಿ
  • ಜೈನ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 50 ಕೋಟಿ ರೂಪಾಯಿ
  • ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ 50 ಕೋಟಿ ರೂಪಾಯಿ
  • 10 ಕೋಟಿ ರೂ. ವೆಚ್ಚದಲ್ಲಿ ಚಿಗುರು ಕಾರ್ಯಕ್ರಮ
  • ಶಿವಮೊಗ್ಗ, ಮೈಸೂರಿನಲ್ಲಿ ಕಿದ್ವಾಯಿ ಮಾದರಿ ಆಸ್ಪತ್ರೆ ನಿರ್ಮಾಣಕ್ಕೆ 100 ಕೋಟಿ ರೂ. ಅನುದಾನ
  • ಕಳಸಾ ಬಂಡೂರಿ ಯೋಜನೆಗೆ 1677 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆ
  • ಭದ್ರಾ ಮೇಲ್ದಂಡೆ ಯೋಜನೆಗೆ 21,474 ಕೋಟಿ ರೂ. ಅನುಮೋದನೆ
  • ಕೃಷ್ಣಾ ಭಾಗ್ಯ ಜಲನಿಗನ ನಿಯಮಿತಕ್ಕೆ 5600 ಕೋಟಿ ರೂಪಾಯಿ
  • 58 ಆಣೆಕಟ್ಟು ಪುನಶ್ಚೇತನಕ್ಕೆ 1500 ಕೋಟಿ ರೂಪಾಯಿ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button