Election

ಮತ್ತೆ ಬಿಜೆಪಿ ಸೇರಿದ ಮಾಜಿ ಸಂಸದ ವಿರೂಪಾಕ್ಷಪ್ಪ

ಬೆಂಗಳೂರು: 2018 ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ರಾಯಚೂರಿನ ಮಾಜಿ ಸಂಸದ ವಿರೂಪಾಕ್ಷಪ್ಪ ಮತ್ತೆ ಬಿಜೆಪಿಗೆ ಮರಳಿದ್ದಾರೆ.
ಬೆಂಗಳೂರಿನಲ್ಲಿ ಪಕ್ಷದ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ವಿರೂಪಾಕ್ಷಪ್ಪ ಪಕ್ಷಕ್ಕೆ ಸೇರಿದ್ದಾರೆ.
ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ಪ್ರತಾಪಗೌಡ ಗೆಲುವಿಗಾಗಿ ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿ ಕುರುಬ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ವಿರೂಪಾಕ್ಷಪ್ಪ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದೆ ಎನ್ನಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button