Election

ಎಸ್‌ಐಟಿಗೆ ಪೂರ್ಣ ಅಧಿಕಾರ ನೀಡಲಾಗಿದೆ ಎಂದ ಬೊಮ್ಮಾಯಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ ಕುರಿತಂತೆ ತನಿಖೆ ನಡೆಸಲು ರಚಿಸಲಾಗಿರುವ ಎಸ್‌ಐಟಿ (ವಿಶೇಷ ತನಿಖಾ ದಳ)ಗೆ ಪೂರ್ಣ ಅಧಿಕಾರ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ವರದಿ ನೀಡುವಂತೆ ಎಸ್‌ಐಟಿಗೆ ಸೂಚನೆ ನೀಡಲಾಗಿದೆ. ಸಿ.ಡಿ ಬಿಡುಗಡೆ ಹಿಂದೆ ಯಾರಿದ್ದಾರೆ ?, ಅವರ ಉದ್ದೇಶ ಏನು ? ಹೀಗೆ ಎಲ್ಲ ಸಂಗತಿಗಳು ಬಯಲಾಗಬೇಕಾಗಿದೆ ಎಂದು ಹೇಳಿದರು.
ಎಸ್‌ಐಟಿಗೆ ಸಂಪೂರ್ಣ ಸ್ವಾತಂತ್ರ‍್ಯ ನೀಡಿದ್ದೇವೆ. ಅವರು ಮುಕ್ತವಾಗಿ ಯಾರನ್ನಾದರೂ ಬೇಕಾದರೂ ವಿಚಾರಣೆಗೆ ಗುರಿಪಡಿಸಬಹುದು. ಇದರಲ್ಲಿ ಸರ್ಕಾರದ ಪಾತ್ರ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಎಸ್‌ಐಟಿಯು ಕೆಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿರುವ ಈ ಹಂತದಲ್ಲಿ ನಾನು ಏನನ್ನೂ ಹೇಳಬಯಸುವುದಿಲ್ಲ. ತನಿಖೆ ನಡೆಯುತ್ತಿರುವುದರಿಂದ ಅಭಿಪ್ರಾಯ ವ್ಯಕ್ತಪಡಿಸುವುದು ಸರಿಯಲ್ಲ ಎಂದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button