Featured StorySports

ಐಪಿಎಲ್ 2024: 31 ರನ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಸನ್ ರೈಸರ್ಸ್ ಹೈದರಾಬಾದ್

ಹೈದರಾಬಾದ್: ಹೈದರಾಬಾದ್ ನಲ್ಲಿ ನಡೆದ ಐಪಿಎಲ್ 2024 8 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹೈದರಾಬಾದ್ ತಂಡ 31 ರನ್ ಗಳಿಂದ ಮಣಿಸಿದೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಮುಂಬೈ ಇಂಡಿಯನ್ಸ್ ತಂಡದ ಬೌಲರ್ ಗಳು ಹೈದರಾಬಾದ್ ತಂಡದ ಬ್ಯಾಟ್ಸ್ ಮನ್ ಗಳನ್ನು ನಿಯಂತ್ರಿಸುವಲ್ಲಿ ಹೈರಾಣಾದರು. ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ 13 ಎಸೆತಗಳಲ್ಲಿ 11 ರನ್ ಗಳಿಸಿದರೆ, ಟ್ರಾವಿಸ್ ಹೆಡ್ (24 ಎಸೆತಗಳಲ್ಲಿ 62 ರನ್) ಅಭಿಷೇಕ್ ಶರ್ಮಾ (23 ಎಸೆತಗಳಲ್ಲಿ 63 ರನ್) ಜೋಡಿ ತಂಡ ದಾಖಲೆಯ ಮೊತ್ತವನ್ನು ಗಳಿಸಲು ನೆರವಾಯಿತು.

ಬಳಿಕ ಐಡೆನ್ ಮಾರ್ಕ್ರಾಮ್ (28 ಎಸೆತಗಳಲ್ಲಿ 42 ರನ್) ಹೆನ್ರಿಕ್ ಕ್ಲಾಸೆನ್ (34 ಎಸೆತಗಳಲ್ಲಿ 80 ರನ್) ಗಳಿಸಿದ್ದು, ತಂಡ ಬೃಹತ್ ಮೊತ್ತದ ರನ್ ಗಳಿಸಲು ಸಾಧ್ಯವಾಯಿತು. 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಹೈದರಾಬಾದ್ ತಂಡ ದಾಖಲೆಯ 277 ರನ್ ಗಳಿಸಿತು.

ಬೃಹತ್ ಮೊತ್ತವನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಎದುರಾಳಿಗಳಿಗೆ ಪ್ರಬಲ ಪೈಪೋಟಿ ನೀಡುವ ಸೂಚನೆ ನೀಡಿತ್ತು. ಆದರೆ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿ 31 ರನ್ ಗಳಿಂದ ಸೋಲೊಪ್ಪಿಕೊಂಡಿತು. ಅಭಿಷೇಕ್ ಶರ್ಮಾ ಪಂದ್ಯಪುರುಷೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದಾರೆ..

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button