Crime

ಟಿಕಾಯತ್ ವಿರುದ್ಧ ಪ್ರಕರಣ: ಎಚ್‌ಡಿಕೆ ವಿರೋಧ

ಬೆಂಗಳೂರು: ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿಸಿದ್ದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.
ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಟಿಕಾಯತ್ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಇದು ರೈತರ ಧ್ವನಿ ಹತ್ತಿಕ್ಕುವ ಕ್ರಮ ಎಂದು ಅವರು ಕಿಡಿ ಕಾರಿದ್ದಾರೆ.
ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ವಿರುದ್ಧ ಎಷ್ಟು ಪ್ರಕರಣ ದಾಖಲಿಸಲಾಗಿದೆ ಎಂದು ಕುಮಾರಸ್ವಾಮಿ ಅವರು ಸರಕಾರವನ್ನು ಪ್ರಶ್ನಿಸಿದ್ದಾರೆ.
ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ ಎಂದು ಟಿಕಾಯತ್ ಎಂದು ಟಿಕಾಯತ್ ಹೇಳಿದ್ದಾರೆ. ಇದರಲ್ಲಿ ಪ್ರಚೋದನೆ ಎಲ್ಲಿದೆ, ಅವರೇನು ಕೊಚ್ಚಿ ಹಾಕಿ, ಕೊಲ್ಲಿ ಎಂದು ಹೇಳಿದ್ದಾರೆಯೇ ಎಂದು ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಟಿಕಾಯತ್ ವಿರುದ್ಧದ ಪ್ರಕರಣವನ್ನು ತಕ್ಷಣ ರದ್ದುಪಡಿಸಬೇಕು ಎಂದು ಎಚ್‌ಡಿಕೆ ಒತ್ತಾಯಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button