
Crime
ಕೋವಿಡ್ ಪ್ರಕರಣ: ನಾಲ್ಕನೇ ಸ್ಥಾನದಲ್ಲಿ ಕರ್ನಾಟಕ
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ರಾಜ್ಯಗಳಲ್ಲಿ ಕರ್ನಾಟಕ 4 ನೇ ಸ್ಥಾನದಲ್ಲಿದೆ ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇಶದ ಎಲ್ಲಾ ರಾಜ್ಯಗಳಲ್ಲಿ ಕೊರೊನಾ 2 ನೇ ಅಲೆ ಆರಂಭವಾಗಿದೆ. ಸೋಂಕು ಹೆಚ್ಚುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ 4 ನೇ ಸ್ಥಾನದಲ್ಲಿದೆ. ಮಹಾರಾಷ್ಟç, ಕೇರಳ, ಪಂಜಾಬ್ ಮತ್ತು ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದೆ ಎಂದರು.
ಸುಮಾರು ಎಂಟು ಹತ್ತು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ 10 ಸಾವಿರಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿವೆ. ಕಳೆದ 15 ದಿನಗಳಲ್ಲಿ ಕೇರಳ, ಮಹಾರಾಷ್ಟç, ಪಂಜಾಬ್ ಗಳಲ್ಲಿ ಕರ್ನಾಟಕಕ್ಕಿಂತ ಅಧಿಕ ಪ್ರಕರಣಗಳು ದಾಖಲಾಗಿವೆ. ಎಲ್ಲಾ ರಾಜ್ಯಗಳಲ್ಲಿ ಎರಡನೇ ಅಲೆ ಆರಂಭವಾಗಿದೆ ಎಂದು ಸಚಿವರು ಹೇಳಿದರು.




