Bidar

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ

ಕಲಬುರಗಿ: ಕಲ್ಲು, ಚಪ್ಪಲಿ ಎಲ್ಲವನ್ನೂ ಎಸೆಯುತ್ತಾರೆ. ಅವರು (ಬಿಜೆಪಿಯವರು) ಮಾಡ್ತಾರೆ ಅಂತ ನಾವು ಮಾಡೋಕೆ ಆಗುತ್ತಾ ಹೀಗೆ ಪ್ರಶ್ನಿಸಿದವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ.
ಬಸವಕಲ್ಯಾಣಕ್ಕೆ ತೆರಳುವ ಮುನ್ನ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರುಮಾತನಾಡಿದರು. ರಾಜ್ಯದ ಜನ ಎಲ್ಲವನ್ನೂ ನೋಡುತ್ತಿದ್ದಾರೆ ಎಂದರು.
ರಾಜಕೀಯದಲ್ಲಿರೋರು ಎಲ್ಲವನ್ನೂ ಸ್ಪೋರ್ಟೀವ್ ಆಗಿಯೇ ತೆಗೆದುಕೊಳ್ಳಬೇಕು. ನಮ್ಮ ಪಾಡಿಗೆ ನಾವು ಕೆಲಸ ಮಾಡಿಕೊಂಡು ಹೋಗಬೇಕು ಎಂದು ರಮೇಶ ಜಾರಕಿಹೊಳಿ ಬೆಂಬಲಿಗರ ಚಪ್ಪಲಿ ಎಸೆತ ಕುರಿತು ಪ್ರತಿಕ್ರಿಯಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಸಿಡಿ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ ಎಂದು ಹೇಳಿದರು.
ಮೂರು ಉಪಚುನಾವಣೆಯಲ್ಲಿ ನಾವು ಗೆಲ್ತೇವೆ. ಬೆಳಗಾವಿಯಲ್ಲಿ ನಮ್ಮ ಟಿಕೆಟ್ ಆಕಾಂಕ್ಷಿಗಳನ್ನ ಒಪ್ಪಿಸಿದ್ದೇವೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡುವಂತೆ ಸೂಚಿಸಿದ್ದೇವೆ. ಅವರು (ಬಿಜೆಪಿ) ಹೆಣ್ಣುಮಗಳನ್ನ ನಿಲ್ಲಿಸಿದ್ದಾರೆ. ಹೀಗಾಗಿ ಬಹಳ ಎಚ್ಚರಿಕೆಯಿಂದ ಕೆಲಸ ಮಾಡುತ್ತೇವೆ ಎಂದರು.
ಬಸವಕಲ್ಯಾಣ, ಮಸ್ಕಿಯಲ್ಲೂ ನಾವೇ ಗೆಲ್ತೇವೆ. ಬಿಜೆಪಿಯ ಆಡಳಿತ ವೈಫಲ್ಯ ಜನರಿಗೆ ಗೊತ್ತಾಗಿದೆ. ಕೋವಿಡ್ ನಿಯಂತ್ರಣದ ವೈಫಲ್ಯ, ಅಭಿವೃದ್ಧಿ ವಿಚಾರದಲ್ಲಿ ಹಿನ್ನೆಡೆ ಎಲ್ಲವೂ ಗೊತ್ತಿದೆ. ಹೀಗಾಗಿ ಜನ ಮೂರು ಕ್ಷೇತ್ರಗಳಲ್ಲಿ ಕೈಹಿಡಿಯುತ್ತಾರೆ ಎಂದು ಡಿ.ಕೆ ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button