Bidar

ಕಾಂಗ್ರೆಸ್ ಸೇರಿದ ಪಿಜಿಆರ್ ಸಿಂಧ್ಯಾ

ಬೀದರ್: ಜೆಡಿಎಸ್ ಹಿರಿಯ ನಾಯಕ ಪಿ.ಜಿ.ಆರ್ ಸಿಂಧ್ಯಾ ಅವರು ಮಂಗಳವಾರ ಕಾಂಗ್ರೆಸ್ ಪಕ್ಷ ಸೇರಿದರು.
ಬಸವ ಕಲ್ಯಾಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಂಧ್ಯಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬಸವಕಲ್ಯಾಣ ಕ್ಷೇತ್ರದಲ್ಲಿ ಏ. 17 ರಂದು ಉಪಚುನಾವಣೆಯ ಮತದಾನ ನಡೆಯಲಿದ್ದು, ರಾಜಕೀಯದಲ್ಲಿ ಸಾಕಷ್ಟು ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಮರಾಠ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಸಿಂಧ್ಯಾ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದೆ. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಕಾಂಗ್ರೆಸ್ ಮುಖಂಡರು ಇದ್ದರು
ಪಿಜಿಆರ್ ಸಿಂಧ್ಯಾ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button