Crime

ದೇವಾಲಯ ಆವರಣದಲ್ಲಿ ಆರ್‌ಎಸ್‌ಎಸ್ ತರಬೇತಿ ನಿಷೇದ

ತಿರುವನಂತಪುರ: ದೇವಾಲಯಗಳ ಆವರಣದಲ್ಲಿ ದೈಹಿಕ ತರಬೇತಿ ನಡೆಸುವ ರಾಷ್ಟ್ರೀಯ ಸ್ವಯಂಸೇವಕ ಸಂಘ ಶಾಖೆಗಳ ಕಾರ್ಯವನ್ನು ತಿರುವಾಂಕೂರು ದೇವಸ್ವಂ ಮಂಡಳಿ ನಿಷೇಧಿಸಿ, ಸುತ್ತೋಲೆ ಹೊರಡಿಸಿದೆ.
ತಿರುವಾಂಕೂರು ದೇವಸ್ವಂ ಮಂಡಳಿ ಆಯುಕ್ತರು ಈ ಸುತ್ತೋಲೆ ಹೊರಡಿಸಿದ್ದು, ತಿರುವಾಂಕೂರು ದೇವಸ್ವಂ ಮಂಡಳಿ ವ್ಯಾಪ್ತಿಗೆ ಒಳಪಡುವ 1,240 ದೇವಾಲಯಗಳಿಗೆ ಇದು ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.
ಒಂದು ವೇಳೆ ನಿಯಮ ಉಲ್ಲಂಘಿಸಿ ಯಾರಾದರೂ ಚಟುವಟಿಕೆಗಳನ್ನು ನಡೆಸಿದರೆ ಕೂಡಲೇ ಆಯುಕ್ತರ ಕಚೇರಿಗೆ ಮಾಹಿತಿ ನೀಡಬೇಕು. ಈ ಕುರಿತು ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button