
UdupiPrime news
ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ
ಉಡುಪಿ: ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲಕ್ಕೆ ಉಚ್ವಾಟಿಸಲಾಗಿದೆ.
ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತವಿಧಾನಪರಿಷತ್ ಚುನಾವಣೆಗೆ ನೈರುತ್ಯ
ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.
ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ ಪಾಟೀಲ್ ಉಚ್ಚಾಟನ ಪತ್ರ ಹೊರಡಿಸಿದ್ದಾರೆ.




