
EducationFeatured StoryState News
ಸಿಇಟಿ ಫಲಿತಾಂಶ ಪ್ರಕಟ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ರ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಶನಿವಾರ ಪ್ರಕಟಿಸಿದೆ. ಹರ್ಷಾ ಕಾರ್ತಿಕೇಯ ಮೊದಲ ರ್ಯಾಂಕ್ ಪಡೆದುಕೊಂಡಿದ್ದಾರೆ. ಏಪ್ರಿಲ್ನಲ್ಲಿ ಸಿಇಟಿ ಪರೀಕ್ಷೆ ನಡೆದಿದ್ದು, 3,10,314 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪ್ರಾಧಿಕಾರದ ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ಫಲಿತಾಂಶ ಲಭ್ಯವಿದೆ.
ಫಲಿತಾಂಶವು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.
ಫಲಿತಾಂಶ ನೋಡುವುದು ಹೇಗೆ?
ಹಂತ 1: kea.kar.nic.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
ಹಂತ 2: ವೆಬ್ಸೈಟ್ನಲ್ಲಿ ಫಲಿತಾಂಶ ಆಯ್ಕೆ ಲಿಂಕ್ ಅನ್ನು ಕ್ಲಿಕ್ ಮಾಡಿ
ಹಂತ 3: ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕದಂತಹ ನಿಮ್ಮ ಮಾಹಿತಿ ನಮೂದಿಸಿ
ಹಂತ 4: ಫಲಿತಾಂಶವನ್ನು ವೀಕ್ಷಿಸಿ ಮತ್ತು ಡೌನ್ಲೋಡ್ ಮಾಡಿ




