Crime

ರಾಯಚೂರು: ನರೇಗಾ-ಸರ್ಕಾರಿ ಶಾಲೆಗಳಿಗೆ ಕಂಪೌಂಡ್ ನಿರ್ಮಾಣ

ರಾಯಚೂರು,ಅ.05:- ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರಾಯಚೂರು ತಾಲೂಕಿನಲ್ಲಿ ಶಾಲೆಗಳಿಗೆ ಸೂಕ್ತ ಆವರಣ ಗೋಡೆಗಳು ಇಲ್ಲದ ಕಾರಣ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ಶಾಲೆಗಳ ಕಂಪೌಂಡ್ ನಿರ್ಮಿಸುವ ಕಾಮಗಾರಿಗೆ ಮುಂದಾಗಿದ್ದಾರೆ.
ತಾಲೂಕಿನ ಸರ್ಕಾರಿ ಶಾಲೆಗಳಿಗೆ ಕಂಪೌಂಡ್ ಇಲ್ಲದೇ ಇರುವ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡು ಪ್ರಸಕ್ತ ಸಾಲಿನಲ್ಲಿ ಶಾಲೆಗಳು ಪ್ರಾರಂಭವಾಗುವ ಮುಂಚೆಯೇ ಶಾಲಾ ಕಾಂಪೌಂಡ್ ಗಳನ್ನು ನಿರ್ಮಾಣ ಮಾಡಬೇಕೆಂದು ಪೂರ್ವ ಯೋಜನೆ ಹಾಕಿ, ಅದರಂತೆ ರಾಯಚೂರು ತಾಲೂಕಿನ ಗಿಲ್ಲೇಸೂಗುರು, ಚಂದ್ರಬಂಡ, ಬಿಜನಗೇರಾ, ಕಲ್ಮಲಾ, ಕಾಡ್ಲೂರು, ಎಲ್.ಕೆ.ದೊಡ್ಡಿ, ಯರಗೇರಾ, ಆತ್ಕೂರು, ಸಗಂಕುಂಟ, ಜೇಗರಕಲ್ ಗ್ರಾಮ ಪಂಚಾಯತಿಗಳಲ್ಲಿ ಶಾಲಾ ಕಾಂಪೌಂಡ್ ಕಾಮಗಾರಿಗಳನ್ನು ಪ್ರಗತಿಯಲ್ಲಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ನಿರ್ದೇಶನದಂತೆ, ಕಾಮಗಾರಿಗಳು ಉತ್ತಮವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಇದಲ್ಲದೇ ಮಳೆಯಿಂದಾಗಿ ಕೆಲವೊಂದು ಪ್ರಾರಂಭ ಹಂತದಲ್ಲಿವೆ ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ರಾಮರೆಡ್ಡಿ ಪಾಟೀಲ್ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button