ElectionBidar

ಬಿಜೆಪಿಯಿಂದ ಮಾಜಿ ಶಾಸಕ ಖೂಬಾ ಉಚ್ಛಾಟನೆ

ಬೆಂಗಳೂರು : ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.
ಈ ಕುರಿತಂತೆ ರಾಜ್ಯ ಬಿಜೆಪಿಯ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪಕ್ಷದ ಅಧಿಕೃತ ಅಭ್ಯರ್ಥಿಯಾದ ಶರಣ ಸಲಗಾರ ಅವರ ವಿರುದ್ಧ ಬಂಡುಕೋರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆಗಾಗಿ ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಅವಧಿಗಾಗಿ ಉಚ್ಛಾಟನೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button