BidarCrime

SSLC ಪರೀಕ್ಷೆಯಲ್ಲಿ ಫೇಲ್ ವಿಧ್ಯಾರ್ಥಿನಿ ನೇಣಿಗೆ ಶರಣು

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-2 ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲೂಕಿನ ವಳಕಿಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಫೇಲ ಆದ ಹಿನ್ನೆಲೆಯಲ್ಲಿ ಮನನೊಂದು ವಳಕಿಂಡಿ ಗ್ರಾಮದ ಪ್ರಕೃತಿ ಅಶೋಕ್‌ ಮಾನಕಾರ (16) ವಿದ್ಯಾರ್ಥಿನಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅಕ್ರಮ ಸಾಗಾಟ ಪಡಿತರ ಅಕ್ಕಿ ಜಪ್ತಿ:

ಬೀದರ್ : ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಅಮೀರಾಬಾದ್ ವಾಡಿ ಕ್ರಾಸ್ ಹತ್ತಿರದಲ್ಲಿ ಅಕ್ರಮವಾಗಿ ಪಡಿತರ ಚೀಟಿ ಅಕ್ಕಿ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ 898 ಕೆ.ಜೆ ಅಕ್ಕಿ ವಶಪಡಿಸಿಕೊಂಡಿದ್ದಾರೆ.

ಪಡಿತರ ಅಕ್ಕಿಯನ್ನು ತೆಗೆದುಕೊಂಡು ಹೋಗಿ ಹೊಸಕನಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮನೆಯಲ್ಲಿ ಸಂಗ್ರಹಿಸಿರುವ ಮಾಹಿತಿ ಮೇರೆಗೆ ಎರಡು ಕಡೆ ದಾಳಿ ಮಾಡಿ 898 ಕೆ.ಜಿ.ಅಕ್ಕಿ ಒಂದು ಟಿವಿಎಸ್ ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ₹45 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳ ವಿರುದ್ಧ ಹಳಿಖೇಡ್ ಬಿ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಪಿಎಸ್‌ಐ ಅಯ್ಯಪ್ಪ, ಆಹಾರ ಇನ್‌ಸ್ಪೆಕ್ಟರ್ ಬಿಂದುಕುಮಾರಿ ಸೇರಿದಂತೆ ಇದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button