Bidar

ಸಾಹಿತ್ಯ ಪರಿಷತ್ ಚುನಾವಣೆ ಮುಂದೂಡಿ

ಬೆಂಗಳೂರು: ಕೊರೊನಾ ಸೋಂಕು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಮುಂದೂಡಬೇಕೆAದು ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಕುವೆಂಪು ಪ್ರಕಾಶ್ ಒತ್ತಾಯಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಭ್ಯರ್ಥಿಗಳಾದ ನಾವು ಸದಸ್ಯರ ಮನೆಗಳಿಗೆ ಹೋಗಿ ಮತ ಕೇಳಲು ಸಾಧ್ಯವಾಗುತ್ತಿಲ್ಲ.
ಮೇ 9ರಂದು ಚುನಾವಣೆ ನಡೆಯಲಿದ್ದು, ತಜ್ಞರ ಪ್ರಕಾರ ಆ ವೇಳೆಗೆ ಕೊರೊನಾ ಮತ್ತಷ್ಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯಾವ ಸದಸ್ಯರೂ ಸರಿಯಾಗಿ ಮತದಾನ ಮಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕನಿಷ್ಟ ಎರಡರಿಂದ ಮೂರು ತಿಂಗಳು ಚುನಾವಣೆಯನ್ನು ಮುಂದೂಡಬೇಕು. ಕೊರೊನಾ ಮುಗಿದ ಮೇಲೆ ದಿನಾಂಕ ನಿಗದಿ ಮಾಡಿ ಈಗಿನ ಪ್ರಕ್ರಿಯೆಯಲ್ಲೇ ಚುನಾವಣೆ ನಡೆಸಬೇಕು ಎಂದು ಚುನಾವಣಾಧಿಕಾರಿಗಳಿಗೆ ಅವರು ಮನವಿ ಮಾಡಿದ್ದಾರೆ.
ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳು ಮತ್ತು ಆನೇಕಲ್ ಸೇರಿದಂತೆ ಬೂತ್‌ಗಳು ಹೆಚ್ಚಾಗಿವೆ. ಮೂರೂವರೆ ಲಕ್ಷ ಮತದಾರರಿರುವ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚು ಮತದಾರರಿದ್ದಾರೆ. ಬೆಂಗಳೂರಿನಲ್ಲಿಯೇ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ತಾತ್ಕಾಲಿಕವಾಗಿ ಸಾಹಿತ್ಯ ಪರಿಷತ್ ಚುನಾವಣೆಯನ್ನು ಮುಂದೂಡಬೇಕು ಎಂದು ಅವರು ಚುನಾವಣಾಕಾರಿಗಳಿಗೆ ಮನವಿ ಮಾಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button