Accident NewsNational

ಮಗು ನಾಮಕರಣಕ್ಕೆ ಹೊರಟಿದ್ದವರು ಮಸಣ ಸೇರಿದರು; ಆರು ಮಂದಿ ಮೃತ್ಯು

ಛತ್ತೀಸ್‌ಗಢ: ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ಭಾನುವಾರ (ಡಿ.15) ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು. ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಬಲೋಡ್‌ನ ದೊಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಭಾನುಪ್ರತಾಪುರ್-ದಳ್ಳಿರಾಜರ ರಸ್ತೆಯ ಚೌರಹಾಪವಾಡ ಬಳಿ ಅಪಘಾತ ಸಂಭವಿಸಿದ್ದು ಟ್ರಕ್ ಚಾಲಕನ ಅವಾಂತರದಿಂದ ಈ ದುರಂತ ಸಂಭವಿಸಿದೆ ಎನ್ನಲಾಗಿದ್ದು ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಕಾರಿನಲ್ಲಿ ವಾಪಸ್ಸಾಗುತ್ತಿದ್ದ ಸಂದರ್ಭ ತಪ್ಪು ದಿಕ್ಕಿನಲ್ಲಿ ಬಂದ ಟ್ರಕ್ ಕಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟು ಏಳು ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರೆಲ್ಲರೂ ಕಾರಿನೊಳಗೆ ಸಿಲುಕಿಕೊಂಡಿದ್ದರು ಈ ಬಗ್ಗೆ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಕಾರಿನಲ್ಲಿ ಸಿಲುಕಿದ್ದವರನ್ನು ಸ್ಥಳೀಯರ ಸಹಕಾರದೊಂದಿದೆ ರಕ್ಷಣೆ ಮಾಡಿದ್ದಾರೆ ಅಷ್ಟೋತ್ತಿಗಾಗಲೇ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು ಗಂಭೀರ ಗಾಯಗೊಂಡಿದ್ದ ಏಳು ಮಂದಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಮಗುವಿನ ನಾಮಕರಣಕ್ಕೆ ತೆರಳಿದ್ದರು:
ಅಪಘಾತದಲ್ಲಿ ಮೃತಪಟ್ಟವರು ಜಿಲ್ಲೆಯ ಗುಂಡರ್ದೇಹಿ ಪ್ರದೇಶದ ನಿವಾಸಿಗಳು ಎಂದು ಹೇಳಲಾಗಿದ್ದು, ಅವರು ದೌಂಡಿಯಲ್ಲಿರುವ ಸಂಬಂಧಿಕರ ಮಗುವಿನ ನಾಮಕರಣ ಸಮಾರಂಭದಲ್ಲಿ ಭಾಗಿಯಾಗಿ ಬಳಿಕ ಗುರೆಡಾಕ್ಕೆ ಹಿಂತಿರುಗುತ್ತಿದ್ದರು ಎನ್ನಲಾಗಿದೆ.

ಮೃತರಲ್ಲಿ ಒಂದು ಮಗು, 4 ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದ್ದಾರೆ, ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಆತನ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button