ಟ್ರಕ್ ಗೆ ಕಾರು ಡಿಕ್ಕಿ | ಮಗು ಸೇರಿ ಐವರು ಸ್ಥಳದಲ್ಲೇ ಮೃತ್ಯು

……….

ಗುಜರಾತ್‌: ವಡೋದರಾ ಬಳಿ ಹೆದ್ದಾರಿಯೊಂದರಲ್ಲಿ ನಿಂತಿದ್ದ ಟ್ರಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅಂಬೆಗಾಲಿಡುವ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ವಡೋದರಾ ಜಿಲ್ಲೆಯ ಕರ್ಜನ್ ತಾಲೂಕಿನಿಂದ ಒಂದೇ ಕುಟುಂಬದ ಇಬ್ಬರು ಪುರುಷರು, ಅವರ ಪತ್ನಿಯರು ಮತ್ತು ಇಬ್ಬರು ಮಕ್ಕಳು ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಭಾನುವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ಒಂದು ವರ್ಷದ ಮಗು ಸೇರಿದಂತೆ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು ಮೂರು ವರ್ಷದ ಮಗುವೊಂದು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.
ಘಟನೆ ಸಂಭವಿಸಿದ ಕೂಡಲೇ ಪೊಲೀಸರು, ಅಗ್ನಿಶಾಮಕ ಸಿಬಂದಿ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಕಾರಿನೊಳಗೆ ಸಿಕ್ಕಿಬಿದ್ದಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಕಾರಿನೊಳಗಿದ್ದ ಐದು ಮಂದಿಯ ಪ್ರಾಣಪಕ್ಷಿ ಹಾರಿಹೋಗಿತ್ತು ಮೂರೂ ವರ್ಷದ ಮಗುವೊಂದು ಮಾತ್ರ ಬದುಕುಳಿದಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Latest Indian news

Popular Stories