ಟಿಪ್ಪರ್ ಹಾಗೂ ಗೂಡ್ಸ್ ಆಟೋ ನಡುವೆ ಡಿಕ್ಕಿ ಇಬ್ಬರಿಗೆ ಗಂಭೀರ ಸ್ವರೂಪದ ಗಾಯ

ಪೊನ್ನಂ ಪೇಟೆಯ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಬೆಳಿಗ್ಗೆ 9:ಗಂಟೆಗೆ ಆಟೋ ಹಾಗೂ ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಗೂಡ್ಸ್ ಆಟೋದಲ್ಲಿ ಇದ್ದ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳು ಉಂಟಾಗಿ ಗೋಣಿಕೊಪ್ಪಲು ಆಸ್ಪತ್ರೆಗೆ ದಾಖಲಪಡಿಸಲಾಗಿದೆ. ಕೇರಳ ನೋಂದಣಿ ಹೊಂದಿರುವ ಗೂಡ್ಸ್ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಆಟೋ ಚಾಲಕರ ಬಗ್ಗೆ ಮಾಹಿತಿ ಇನ್ನು ಲಭ್ಯವಾಗಿಲ್ಲ.

ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೊನ್ನಂಪೇಟೆ ಯಲ್ಲಿ ಬಸ್ ನಿಲ್ದಾಣದಿಂದ ರಾಮಕೃಷ್ಣ ಆಶ್ರಮದವರೆಗೆ ಕೆಲವರು ಎರಡು ಬದಿ ಪಾರ್ಕಿಂಗ್ ಮಾಡುವುದರಿಂದ ವಾಹನ ಸಂಚಾರಕ್ಕೆ ಪ್ರತಿದಿನ ಅಡಚಣೆ ಉಂಟಾಗುತ್ತಿದ್ದು ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಂಡು ಸಂಚಾರ ವ್ಯವಸ್ಥೆ ಸುಗಮ ಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಇತ್ತೀಚಿಗೆ ಪೊನ್ನಂಪೇಟೆ ಭಾಗದಲ್ಲಿ ಹೆಚ್ಚಾಗಿ ಟಿಪ್ಪರ್ ಗಳು ಓಡಾಡುತ್ತಿದ್ದು ಇವುಗಳು ಅತಿ ವೇಗವಾಗಿ ಗೋಣಿಕೊಪ್ಪಲು ಪೊನ್ನಂಪೇಟೆ ರಸ್ತೆಯಲ್ಲಿ ರಾತ್ರಿ ಹಗಲು ಸಂಚರಿಸುತ್ತಿದ್ದು ಟಿಪ್ಪರ್ ಗಳ ವೇಗಕ್ಕೆ ಕಡಿವಾಣ ಹಾಕಬೇಕಾಗಿದೆ.

Latest Indian news

Popular Stories