ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

ಶ್ರೀನಗರ: ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಕ್ಸಿಯೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಹತ್ತು ಜನರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ರಾಂಬನ್ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ.

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ಸ್ಥಳೀಯ ಪೊಲೀಸ್, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ ಡಿಆರ್ ಎಫ್) ಮತ್ತು ರಾಂಬನ್ ನ ನಾಗರಿಕ ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್ ಟಿ) ತಂಡವು ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ತಲುಪಿದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಖಚಿತಪಡಿಸಿದ್ದಾರೆ.

ಗುರುವಾರ ಹವಾಮಾನ ಇಲಾಖೆಯ ಮುನ್ಸೂಚನೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಪ್ರದೇಶದಲ್ಲಿ ಗುಡುಗು ಸಹಿತ ಮಳೆ ಅಥವಾ ಹಿಮ ಬೀಳುವ ಸಾಧ್ಯತೆಯಿದೆ ಎಂದು ಹೇಳಿದೆ.

Latest Indian news

Popular Stories