ವಿಜಯಪುರ: ಬೈಕ್-ಬಸ್ ಡಿಕ್ಕಿ: ಓರ್ವ ಮೃತ್ಯು

ವಿಜಯಪುರ: ಬೈಕ್ ಹಾಗೂ ಬಸ್ ಮಧ್ಯೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಅಸೂನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮುಳವಾಡ ಗ್ರಾಮದಲ್ಲಿ ನಡೆದಿದೆ.


ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯನ್ನು ರಾಜಕುಮಾರ ಕಾಳೆ ಎಂದು ಗುರುತಿಸಲಾಗಿದೆ.


ಇನ್ನು ಹೆಂಡತಿ ಮನೆಗೆ ಜೋಳ ತೆಗೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest Indian news

Popular Stories