ವಿಜಯಪುರ: ಗೂಡ್ಸ್ ಹಾಗೂ ಕ್ರೂಜರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಓರ್ವ ಮಹಿಳೆ ಅಸುನೀಗಿರುವ ಘಟನೆ ವಿಜಯಪುರ ತಾಲ್ಲೂಕಿನ ಮಧಬಾವಿ ಕ್ರಾಸ್ ಬಳಿ ನಡೆದಿದೆ.
ಸುನಂದಾ ಹಾದಿಮನಿ (40) ಮೃತಪಟ್ಟಿರುವ ದುರ್ದೈವಿ. ಅಲ್ಲದೇ, ಘಟನೆಯಲ್ಲಿ 3 ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.