ಬೆಂಗಳೂರು: ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು, ತರೆಗೆಲೆಗಳಂತೆ ಕೆಳಗೆ ಬಿದ್ದ ಸವಾರರು- ಭಯಾನಕ ವಿಡಿಯೋ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹುಳಿಮಾವು ಬಳಿ ಸೋಮವಾರ ಕಾರೊಂದು ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ನಂತರ ನಾಲ್ವರು ಗಾಯಗೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

17 ಸೆಕೆಂಡ್ ಗಳ ವಿಡಿಯೋದಲ್ಲಿ ಜನನಿಬಿಡ ರಸ್ತೆಯಲ್ಲಿ ನಿಧಾನಗತಿಯಲ್ಲಿ ವಾಹನಗಳು ಸಂಚರಿಸುತ್ತಿರುವಾಗ ಇದಕ್ಕಿದ್ದಂತೆ ಹಿಂದಿನಿಂದ ಬಂದ ಕಾರು, ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದಿದ್ದು, ಸವಾರರು ಕಾರಿನ ಬಾನೆಟ್ ಮೇಲೆ ಬಿದ್ದು, ತರೆಗೆಲೆಗಳಂತೆ ಕೆಳಗೆ ಬಿದ್ದಿದ್ದಾರೆ.

ಕೆಲವರು ಇಕ್ಕಟ್ಟಾದ ರಸ್ತೆಯ ಎಡಭಾಗಕ್ಕೆ ಬಿದ್ದರೆ, ಮತ್ತೆ ಕಲವರು ಇತರ ವಾಹನಗಳ ಮಧ್ಯ ಬಿದ್ದಿದ್ದಾರೆ. ಇದನ್ನು ನೋಡಿದ ಇತರರು ತಕ್ಷಣ ನೆರವಿಗೆ ಧಾವಿಸಿದ್ದು, ಬೈಕ್ ಸವಾರರನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

Latest Indian news

Popular Stories