Accident NewsUttara Kannada

ಕರಾವಳಿ ಸುದ್ದಿ | ಟ್ಯಾಂಕರ್ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಕಾರವಾರ : ಕಾರವಾರದಿಂದ ಮುಂಡಗೋಡಕ್ಕೆ ಹೋಗುತ್ತಿದ್ದ‌ ಬೈಕ್ ಸವಾರನೋರ್ವನಿಗೆ ಟ್ಯಾಂಕರ್ ‌ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅರಬೈಲ್ ಘಟ್ಟದಲ್ಲಿ ನಡೆದಿದೆ.

ಅಪಘಾತದಲ್ಲಿ ಪರಶುರಾಮ ಎಂಬ ಯುವಕ ಸಾವನ್ನಪ್ಪಿದ್ದಾನೆ. ಪರುಶುರಾಮ ಕಾರವಾರದಲ್ಲಿ ಹೋಮ್ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಈತನ ಅಕ್ಕ ಕಾರವಾರದಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಆಗಿ‌ ಕಾರ್ಯನಿರ್ವಹಿಸುತ್ತಿದ್ದು, ಈತ ತಾಯಿಯನ್ನು ನೋಡಲೆಂದು ಕಾರವಾರದಿಂದ ಮುಂಡಗೋಡಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ‌ ಎನ್ನಲಾಗಿದೆ. ಈ ವೇಳೆ ಯಲ್ಲಾಪುರ ಕಡೆಯಿಂದ ಅಂಕೋಲಾ‌ ಕಡೆ ಬರುತ್ತಿದ್ದ ಡಾಂಬರ್ ತುಂಬಿದ ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button