ಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲು

ಬೆಳಗಾವಿ : ಸಾರಿಗೆಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ.

ಗಾಯಾಳುವನ್ನು ನಂದಿಕುರುಳಿ ನಿವಾಸಿ ಸಂಜನಾ ದತ್ತವಾಡೆ ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ

ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿಗೆ ಚಿಕ್ಕೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest Indian news

Popular Stories