ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು – VIDEO VIRAL

ಆಂಧ್ರಪ್ರದೇಶ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಅದಕ್ಕೆ ನಿದರ್ಶನ ಎಂಬಂತೆ ಇತ್ತೀಚಿಗೆ ತನ್ನ ಸ್ನೇಹಿತನ ಮದುವೆ ಸಮಾರಂಭಕ್ಕೆ ತೆರಳಿದ್ದ ಗೆಳೆಯನೋರ್ವ ಮದುವೆ ಸಮಾರಂಭದ ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರಿನ ಅಮೆಜಾನ್ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ವಂಶಿಕುಮಾರ್ ಮೃತ ದುರ್ದೈವಿ.

ಇತ್ತೀಚಿಗೆ ವಂಶಿ ಆಂದ್ರಪ್ರದೇಶದ ಕರ್ನೂಲ್ ಜಿಲ್ಲೆಯ ಕೃಷ್ಣಗಿರಿ ಮಂಡಲದ ಪೆನುಮಾಡದಲ್ಲಿ ತನ್ನ ಸ್ನೇಹಿತನ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ಈ ವೇಳೆ ತನ್ನ ಸಹ ಸ್ನೇಹಿತರ ಜೊತೆ ವೇದಿಕೆಗೆ ತೆರಳಿ ನವ ದಂಪತಿಗಳಿಗೆ ಉಡುಗೊರೆ ನೀಡಿದ್ದಾರೆ, ನವದಂಪತಿಗಳು ಸಂಭ್ರಮದಿಂದ ಉಡುಗೊರೆಯ ಕವರ್ ತೆರೆಯುತ್ತಿದ್ದ ವೇಳೆ ವೇದಿಕೆ ಮೇಲಿದ್ದ ವಂಶಿಕುಮಾರ್ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾನೆ ಇದನ್ನು ಗಮನಿಸಿದ ಸ್ನೇಹಿತರು ತಕ್ಷಣ ಆತನನ್ನು ಹಿಡಿದಿದ್ದಾರೆ ಬಳಿಕ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ದುರಾದೃಷ್ಟವಶಾತ್ ತಪಾಸಣೆ ನಡೆಸಿದ ವೈದ್ಯರು ವಂಶಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Latest Indian news

Popular Stories