ಚೆನ್ನೈ: ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ರಿಕ್ಷಾವೊಂದು ಪಲ್ಟಿಯಾಗಿ 10 ವರ್ಷದ ಬಾಲಕ ಮೃತಪಟ್ಟು ಇತರ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ.
ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ
ಆಟೋವನ್ನು ಸುಂದರ್ ಎನ್ನುವವರು ಚಲಾಯಿಸುತ್ತಿದ್ದರು. ಆಟೋದಲ್ಲಿ 11 ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದರು. ಕರುಂಗುಲಂ, ಶಿವಂಧಿಪುರಂ ಮತ್ತು ವಿಕ್ರಮಸಿಂಗಪುರದಿಂದ ಮಕ್ಕಳನ್ನು ಹತ್ತಿಸಿಕೊಂಡು ಪ್ರಯಾಣಿಸುತ್ತಿದ್ದ ವೇಳೆ ಅಂಬಾಸಮುದ್ರಂ ಬಳಿ ಚಾಲಕನ ನಿಯಂತ್ರಣ ಆಟೋ ಪಲ್ಟಿಯಾಗಿದೆ. ಪರಿಣಾಮ ವಿದ್ಯಾರ್ಥಿಗಳ ಆಟೋದೊಳಗೆ ಸಿಲುಕಿಕೊಂಡಿದ್ದಾರೆ.
ಸ್ಥಳೀಯರು ಕೂಡಲೇ ರಕ್ಷಣೆಗೆ ಧಾವಿಸಿದ್ದಾರೆ. ಆದರೆ ತೀವ್ರ ಗಾಯಗೊಂಡಿದ್ದ 5ನೇ ತರಗತಿಯ ಬಾಲಕ ಸಾವನ್ನಪ್ಪಿದ್ದಾನೆ.ಇನ್ನು ಮೂವರು ವಿದ್ಯಾರ್ಥಿಗಳು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.