ಬಂಟ್ವಾಳ: ಮರಕ್ಕೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ; ಅಮ್ಟಾಡಿಯ ಯುವಕ ಮೃತ್ಯು

ಬಂಟ್ವಾಳ: ದ್ವಿಚಕ್ರ ವಾಹನ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ನಡೆದಿದೆ.

ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಅವಿವಾಹಿತ ಯುವಕ.

ಅಕ್ಷಿತ್ ಅವರು ಮಂಗಳೂರು ಖಾಸಗಿ ಕಂಪೆನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸುಮಾರು ನಾಲ್ಕು ಗಂಟೆಗೆ ಹೊರಟಿದ್ದ. ಅಂದಾಜು 4.30 ಗಂಟೆಗೆ ಮಾರಿಪಳ್ಳ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆದಾಗಲೇ ಮೃತಪಟ್ಟಿದ್ದಾನೆ.

ಮುಂಜಾವಿನ ವೇಳೆ ನಿದ್ದೆಯ ಮಂಪರಿನಲ್ಲಿ ಅಥವಾ ಇನ್ನಾವುದೇ ಕಾರಣದಿಂದ ಅಪಘಾತ ಸಂಭವಿಸಿದೆ ಎಂಬುದು ಇನ್ನು ತನಿಖೆಯ ವೇಳೆ ತಿಳಿಯಬೇಕಾಗಿದೆ.

ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Latest Indian news

Popular Stories