ಜೆಹನಾಬಾದ್ (ಬಿಹಾರ): ಬಿಹಾರ ರಾಜ್ಯದ ಜೆಹನಾಬಾದ್ ಜಿಲ್ಲೆಯ ಬಾಬಾ ಸಿದ್ಧಾಂತ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಜನರು, ಹೆಚ್ಚಾಗಿ ಕನ್ವಾರಿಯಾದವರು ಮೃತಪಟ್ಚಿದ್ದಾರೆ ಮತ್ತು ಸುಮಾರು 50 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕೆಲವು ವಿಷಯದ ಬಗ್ಗೆ ಕನ್ವಾರಿಯಾಗಳ ನಡುವೆ ವಾಗ್ವಾದ ನಡೆದಿದ್ದು, ವಾಗ್ವಾದ ಮತ್ತು ಹೊಡೆದಾಟವು ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಲಂಕೃತಾ ಪಾಂಡೆ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದರು.
ನಿನ್ನೆ ಭಾನುವಾರ ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದೆ.