ದೇವರ ಕೊಲ್ಲಿ ಬಳಿ ಬೈಕ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿದೆ. ಆಸ್ಪತ್ರೆಗೆ ಸಾಗಿಸುವ ಸಂದರ್ಭ ಬೈಕ್ ಸವಾರ ಮೃತಪಟ್ಟಿರುವುದಾಗಿ ಹೇಳಲಾಗಿದೆ.