ಬಿಎಂಡಬ್ಲ್ಯು ಹಿಟ್ ಅಂಡ್ ರನ್ ಪ್ರಕರಣ: ಪುತ್ರನ ಬಂಧನದ ನಂತರ ಶಿಂಧೆ ಬಣ ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ

ಮುಂಬೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೋಮವಾರ ತನ್ನ ಉಪ ನಾಯಕ ರಾಜೇಶ್ ಶಾ ಅವರನ್ನು ವಜಾಗೊಳಿಸಿದೆ.

ಇತ್ತೀಚಿನ ಬಿಎಂಡಬ್ಲ್ಯು ಹಿಟ್ ಅಂಡ್ ರನ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರಾಜೇಶ್ ಶಾ ಅವರ ಪುತ್ರ ಮಿಹಿರ್ ಶಾ ಅವರನ್ನು ಬಂಧಿಸಿದ ನಂತರ ಶಿವಸೇನೆ ಈ ಕ್ರಮ ತೆಗೆದುಕೊಂಡಿದೆ.

ಶಿವಸೇನಾ ಕಾರ್ಯದರ್ಶಿ ಸಂಜಯ್ ಮೋರೆ ಅವರು, ರಾಜೇಶ್ ಶಾ ಅವರನ್ನು ಪಕ್ಷದ ಉಪನಾಯಕ ಸ್ಥಾನದಿಂದ ಬಿಡುಗಡೆಗೊಳಿಸಿರುವುದಾಗಿ ಎಂದು ಒನ್ ಲೈನ್ ಸೂಚನೆ ನೀಡಿದ್ದಾರೆ. ಆದಾಗ್ಯೂ ರಾಜೇಶ್ ಶಾ ಅವರು ಶಿವಸೇನೆಯ ಸದಸ್ಯರಾಗಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಆಡಳಿತಾರೂಢ ಶಿವಸೇನೆ ನಾಯಕ ರಾಜೇಶ್ ಶಾ ಅವರ ಪುತ್ರ 24 ವರ್ಷದ ಮಿಹಿರ್ ಶಾ ಚಲಾಯಿಸುತ್ತಿದ್ದ ಕಾರು ಭಾನುವಾರ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ಮಹಿಳೆ ಸಾವಿಗೀಡಾಗಿದ್ದರು. ನಂತರ ಶಾ ತಲೆಮರೆಸಿಕೊಂಡಿದ್ದರು. ಆದರೆ ಮೂರು ದಿನಗಳ ನಂತರ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Latest Indian news

Popular Stories