ಚಿಕ್ಕಮಗಳೂರು: ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

ಚಿಕ್ಕಮಗಳೂರು:ತಾಲೂಕಿನ ಬಾಬಾ ಬುಡನ್ ಗಿರಿ ಬಳಿ ಭಾನುವಾರ ಪ್ರವಾಸಿ ಬಸ್ ಪಲ್ಟಿಯಾಗಿ , 23 ಜನರು ಗಾಯಗೊಂಡಿದ್ದಾರೆ. ಅವಘಡದಲ್ಲಿ ಬಸ್ ನಲ್ಲಿದ್ದ 6 ಜನರಿಗೆ ಗಂಭೀರ ಗಾಯಗಳಿಗೆ ಒಳಗಾಗಿದ್ದಾರೆ.

ಬಾಬಾ ಬುಡನ್ ಗಿರಿ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿ ಬಿದ್ದಿದೆ. ಪ್ರವಾಸಿಗರು ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

Latest Indian news

Popular Stories