ಗೌರಿಬಿದನೂರಿನಲ್ಲಿ ಅಪಘಾತ: ಆಟೋಗೆ ಕ್ಯಾಂಟರ್ ಡಿಕ್ಕಿ, 11 ವಿದ್ಯಾರ್ಥಿಗಳಿಗೆ ಗಾಯ

ಗೌರಿಬಿದನೂರು: ಆಟೋಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ 11 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲೂಡಿ ಬಳಿ ಗುರುವಾರ ನಡೆದಿದೆ.

ಆಟೊ ಚಾಲಕ ಶ್ರೀನಿವಾಸ್, ಲೋಕೇಶ್, ವೆನ್ನೆಲಾ, ಸಹನ, ತ್ರಿವೇಣಿ, ಪವಿತ್ರ, ರೋಷಿಣಿ ಸೇರಿದಂತೆ ಒಟ್ಟು 11 ಮಂದಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಆಟೊದಲ್ಲಿ ಇದ್ದರು ಎಂದು ತಿಳಿದುಬಂದಿದೆ.

11 ಮಂದಿಯ ಪೈಕಿ ಕೆಲ ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಮೂವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಉಳಿದ ವಿದ್ಯಾರ್ಥಿಗಳಿಗೆ ಗೌರಿಬಿದನೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮಂದುವರೆದಿದೆ. ಘಟನಾ ಸ್ಥಳಕ್ಕೆ ಗೌರಿಬಿದನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂವರು ವಿದ್ಯಾರ್ಥಿನಿಯರು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಗೌರಿಬಿದನೂರಿನಿಂದ ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಆಟೋದಲ್ಲಿ ಚಾಲಕ, ಇಬ್ಬರು ವಿದ್ಯಾರ್ಥಿನಿಯರು ಸೇರಿ ಎಂಟು ಜನ ವಿದ್ಯಾರ್ಥಿನಿಯರು ಪ್ರಯಾಣಿಸುತ್ತಿದ್ದರು. ಎಂದಿನಂತೆ ವಿದ್ಯಾರ್ಥಿನಿಯರು ಕಾಲೇಜಿಗೆ ಬರುತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿನಿಯರು ದೊಡ್ಡಕುರುಗೋಡು ಗ್ರಾಮದವರಾಗಿದ್ದಾರೆ. ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Latest Indian news

Popular Stories