Accident News

ಶಿವಮೊಗ್ಗ ಕುವೆಂಪು ವಿಶ್ವ ವಿದ್ಯಾಲಯದ ವೆಬ್ ಸೈಟ್ ಹ್ಯಾಕ್

ಶಿವಮೊಗ್ಗ: ಶಿವಮೊಗ್ಗದ ಕುವೆಂಪು ವಿಶ್ವ ವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ ಆಗಿದೆ. ತಡರಾತ್ರಿ ಈ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರತಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವ ವಿದ್ಯಾಲಯದ ವೆಬ್ ಸೈಟ್ ನನ್ನು ಹ್ಯಾಕರ್ಸ್ ಗಳು ಹ್ಯಾಕ್ ಮಾಡಿದ್ದಾರೆ.

ಪ್ರೋ ಪ್ಯಾಲೆಸ್ಟೈನ್ ನಿಂದ ಈ ಕೃತ್ಯವೆಸಗಲಾಗಿದೆ. ವೆಬ್ ಸೈಟ್ ಹ್ಯಾಕ್ ಮಾಡಿ ಕಲೀಮಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ.ಸೇವ್ ಪ್ಯಾಲಎಸ್ಟೈನ್-ಇಸ್ರೇಲ್ ಡಾಗ್ ಎಂದು ವೆಬ್ ಸೈಟ್ ನಲ್ಲಿ ಉಲ್ಲೇಖ ಮಾಡಲಾಗಿದೆ.

ಹ್ಯಾಕ್ ಆದ ಬಳಿಕ ವಿವಿ ತಾಂತ್ರಿಕ ತಂಡ ವೆಬ್ ಸೈಟ್ ಸ್ಥಗಿತಗೊಳಿಸಿದೆ. ವಿವಿ ವೆಬ್ ಸೈಟ್ ಹ್ಯಾಕ್ ಆಗಿರುವ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button