Accident NewsState News

ಹುಣಸೂರು | ಜೀಪ್ -ಬಸ್ ನಡುವೆ ಅಪಘಾತ ನಾಲ್ವರು ಮೃತ್ಯು

ಹುಣಸೂರು ಶುಂಠಿ ಕೆಲಸಕ್ಕೆ ಕೂಲಿಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ -ಬಸ್ ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ.

ಹೆಚ್‌ .ಡಿ.ಕೋಟೆ ತಾಲೂಕಿನ ಜಿಯಾರ ಗ್ರಾಮದ ಸುತ್ತಮುತ್ತಲಿನ ಹಳ್ಳಿಯ ಕೂಲಿ ಕಾರ್ಮಿಕರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿದೆ.

ಇನ್ಸ್ ಪೆಕ್ಟರ್ ದೇವೆಂದ್ರ ನೇತೃತ್ವದಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದವರ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಗೆ ಪೊಲೀಸ್ ಸಿಬ್ಬಂದಿಗಳು ಸಾಗಿಸಿದರು.

ಹುಣಸೂರು ಆಸ್ಪತ್ರೆಯಲ್ಲಿ ಗಾಯಾಳು ಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾವನ್ನಪ್ಪಿದವರ ಗುರುತು ಪತ್ತೆಯಾಗಿಲ್ಲ. ಚಾಲಕ ಕುಮಾರ್ ಸೇರಿದಂತೆ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button