ಮಂಗಳೂರು: ಕಾರೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ತಡ ರಾತ್ರಿ ನಗರದ ಕಾವೂರಿನಲ್ಲಿ ನಡೆದಿದೆ.
ಕುದುರೆಮುಖ ಕಂಪೆನಿಯ ಉದ್ಯೋಗಿ ಶೇಖರಪ್ಪ ಮೃತ ವ್ಯಕ್ತಿ.
ಇವರು ಕುದುರೆಮುಖ ಕಂಪೆನಿಯ ಮಂಗಳೂರು ಪೋರ್ಟ್ ಫೆಸಿಲಿಟೀಸ್ ವಿಭಾಗಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳವಾರ ರಾತ್ರಿ ಸುಮಾರು 11ಗಂಟೆಗೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಢಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಶೇಖರಪ್ಪರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.