ಕೊಡಗು: ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬುಲೆನ್ಸ್ ಅಪಘಾತ

ಕೊಡಗು:

ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದವನನ್ನು ತುರ್ತು ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮಾರ್ಗ ಮಧ್ಯದಲ್ಲಿ ಲಾರಿಗೆ ಡಿಕ್ಕಿಯಾದ ಘಟನೆ ವರದಿಯಾಗಿದೆ.

ಮರದಿಂದ ಬಿದ್ದಿದ್ದ ಗಾಯಾಳುವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಿಂದ ಆಸ್ಪತ್ರೆಯ ಆಂಬುಲೆನ್ಸ್‌ ನಲ್ಲಿ ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಕೊಳೊತ್ತೊಡು ಹಾತೂರು ಬಳಿ ಪೊನ್ನು ಎಂಬವರು ಚಲಾ ಯಿಸುತ್ತಿದ್ದ ಲಾರಿಗೆ ಆಂಬುಲೆನ್ಸ್ ಡಿಕ್ಕಿಯಾಗಿದೆ.
ಇದರಿಂದ ಲಾರಿ ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿ ನಿಂತಿದೆ. ಅಂಬುಲೆನ್ಸ್ ಚಾಲಕ ಯಾದವ್ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಸುಳ್ಯ ಆಸ್ಪತ್ರೆಗೆ ರವಾನಿಸಲಾಗಿದೆ.

Latest Indian news

Popular Stories