ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿ – ಮೃತ್ಯು

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಚಾರಿಯೊಬ್ಬರು ರಸ್ತೆ ದಾಟುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿಯಾಗಿ ಪಾದಚಾರಿ ಮೃತಪಟ್ಟಿದ್ದಾರೆ‌

ಮೃತರನ್ನು ಅನಂತಯ್ಯ (68) ಎಂದು ಗುರುತಿಸಲಾಗಿದೆ.

ಕೇರಳ ನೋಂದಾಯಿತ ಗೂಡ್ಸ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೃತರಿಗೆ ತಲೆಗೆ ಸೊಂಟಕ್ಕೆ, ಹಾಗೂ ಎರಡೂ ಕೈಗೆ ಕಾಲಿಗೆ ತೀವ್ರ ಸ್ವರೂಪದ ಗಾಯವಾಗಿತ್ತು. ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅಲ್ಲಿ ಪರಿಶೀಲಿಸಿದ ವೈದ್ಯರು ಮೃತಪಟ್ಟಿರುವುದನ್ನು ಧೃಡೀಕರಿಸಿದ್ದಾರೆ.

ಈ ಕುರಿತು ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories