ಕುಂದಾಪುರ: ಬೈಕೊಂದು ಡಿವೈಡರ್ ಗೆ ಡಿಕ್ಕಿ – ಯುವಕ ಮೃತ್ಯು

ಕುಂದಾಪುರ: ಬೈಕೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ತಾಲೂಕಿನ ತಲ್ಲೂರು ಸಮೀಪದ ಹೇರಿಕುದ್ರು ಬಿಡ್ಜ್ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.

ಬೈಂದೂರು ಸಮೀಪದ ನಾಗೂರು ಮೂಲದ, ಪ್ರಸ್ತುತ ಕುಂದಾಪುರದ ನಿವಾಸಿ ಮೊಹಮ್ಮದ್ ಫರ್ವೇಜ್(37) ಮೃತ ವ್ಯಕ್ತಿ. ಇವರು ಬೈಕಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಮಧ್ಯೆ ಇರುವ ಡಿವೈಡರ್‌ಗೆ ಢಿಕ್ಕಿ ಹೊಡೆಯಿತ್ತನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಇವರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Latest Indian news

Popular Stories