ಮಲ್ಪೆ: ಅರ್ಥಿಕ ಸಮಸ್ಯೆಯಿಂದ ಮನನೊಂದು ಆತ್ಮಹತ್ಯೆ

ಮಲ್ಪೆ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆರ್ಥಿಕ ಸಮಸ್ಯೆ ಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.19ರಂದು ಸಂಜೆ ನಡೆದಿದೆ.


ಮೃತರನ್ನು ಅಶ್ರಫ್(53) ಎಂದು ಗುರುತಿಸಲಾಗಿದೆ. ಮೀನು ಮಾರಾಟ ಮಾಡುವ ಕೆಲಸ ಮಾಡಿಕೊಂಡಿದ್ದ ಇವರು, ಸುಮಾರು 4 ವರ್ಷಗಳಿಂದ ಬೆನ್ನಿನ ಡಿಸ್ಕನ ನೋವಿನಿಂದ ಬಳಲುತ್ತಿದ್ದರು. ಅನಾರೋಗ್ಯದಿಂದ ಕೆಲಸ ಮಾಡಲು ಸಾದ್ಯವಾಗದೇ ಆರ್ಥಿಕ ಸಮಸ್ಯೆಯಿಂದ ಮನನೊಂದ ಇವರು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Latest Indian news

Popular Stories