ಮಂಡ್ಯ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿರುವ ಭೀಕರ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ನ ಬೆಂಗಳೂರು – ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರಿನ ಬೆಂಡಿಗನಹಳ್ಳಿಯ ನಮಿತಾ, ರಾಜಸ್ಥಾನ ಮೂಲದ ಪಂಕಜ್ ಶರ್ಮಾ, ವಂಶಿಕೃಷ್ಣ ಧಾರವಾಡದ ರಘುನಾಥ್ ಭಜಂತ್ರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಹಾಸನ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಬೆಳ್ಳೂರು ಕ್ರಾಸ್ ಬಳಿ ಬರುತ್ತಿದ್ದಂತೆ ಮುಂದೆ ಹೋಗುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸದಿಂದ ಕಾರು ನಜ್ಜು-ಗುಜ್ಜಾಗಿದ್ದು, ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.