Accident NewsDakshina KannadaFeatured Story

ಮಂಗಳೂರು: ಬಸ್ ಮಗುಚಿಬಿದ್ದು ಹಲವರಿಗೆ ಗಾಯ

ಮಂಗಳೂರು: ಗುರುಪುರದಿಂದ ಬಿಸಿರೋಡ್‌ಗೆ ತೆರಳುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೈಕಂಬದ ಪೊಳಲಿ ದ್ವಾರದ ಬಳಿ ನಡೆದಿದೆ. ಬಸ್ಸಿನಲ್ಲಿ ಸುಮಾರು 50ರಷ್ಟು ಪ್ರಯಾಣಿಕರಿದ್ದು, ಕೆಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಆದರೆ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಮುಸ್ಸಂಜೆ ವೇಳೆ ನವದುರ್ಗಾ ಹೆಸರಿನ ಬಸ್ಸು ಗುರುಪುರದಿಂದ ಬಿಸಿರೋಡ್‌ಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬಹಳಷ್ಟು ಮಂದಿ ಬಸ್‌ನಲ್ಲಿ ಇದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

“ಕಿನ್ನಿಗೋಳಿಯಿಂದ ಬಿಸಿರೋಡ್‌ಗೆ ತೆರಳುತ್ತಿದ್ದ ಬಸ್ ಬ್ರೇಕ್ ಫೈಲ್ ಆಗಿ ಈ ಅಪಘಾತ ಸಂಭವಿಸಿದೆ. ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಜ್ಪೆ ಪೊಲೀಸರು ಮಾಹಿತಿ ನೀಡಿದ್ದಾರೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button